ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳ ; ನಾಳೆಯಿಂದಲೇ ಹೊಸ ದರ ಜಾರಿ
ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆಗೊಂಡು ಎರಡು ದಿನದಲ್ಲೇ ಟೋಲ್ ಸಂಗ್ರಹಕ್ಕೆ ಶುರು ಮಾಡಿದ್ದಾರೆ.
ಹೀಗಾಗಿ ಟೋಲ್ ವಿಚಾರವಾಗಿ ವಾಹನ ಸವಾರರು ಹಾಗೂ ಟೋಲ್ ಸಿಬ್ಬಂದಿ ನಡುವೆ ವಾರ್‌ಗಳು ಆಗುತ್ತಲೇ ಇವೆ.
ಹೊಸ ಟೋಲ್ ದರದ ವಿವರ ಇಲ್ಲಿದೆ
1. ಕಾರು, ವ್ಯಾನ್, ಜೀಪ್: 165 ರೂಪಾಯಿ, ದ್ವಿಮುಖ ಸಂಚಾರ 250 ರೂಪಾಯಿ ಮತ್ತು ಒಂದು ಬಾರಿ 30 ರೂಪಾಯಿ, ಮತ್ತೊಂದು ಬಾರಿ 45 ರೂಪಾಯಿ ಹೆಚ್ಚಳ ಮಾಡಲಾಗಿದೆ.
2. ಟ್ರಕ್, ಬಸ್, ಟ್ಯಾಕ್ಸಿ: 565 ರೂಪಾಯಿ, ದ್ವಿಮುಖ ಸಂಚಾರಕ್ಕೆ 850 ರೂಪಾಯಿ. ಹಾಗೆಯೇ ಒಂದು ಬಾರಿ 165 ರೂಪಾಯಿ, ಮತ್ತೊಂದು ಬಾರಿ 160 ರೂಪಾಯಿ ಹೆಚ್ಚಳ ಮಾಡಲಾಗಿದೆ.
3. ಲಘು ವಾಹನಗಳು, ಮಿನಿ ಬಸ್: 270 ರೂಪಾಯಿ, ದ್ವಿಮುಖ ಸಂಚಾರಕ್ಕೆ 405 ರೂಪಾಯಿ ಆಗಿದೆ. ಅಲ್ಲದೇ ಒಂದು ಬಾರಿ 50 ರೂಪಾಯಿ ಎರಡನೇ ಬಾರಿ 75 ರೂಪಾಯಿ ಹೆಚ್ಚಳ ಮಾಡಲಾಗಿದೆ.
5. ಭಾರಿ ವಾಹನಗಳು: 885 ರೂಪಾಯಿ, ದ್ವಿಮುಖ ಸಂಚಾರಕ್ಕೆ 1,330 ರೂಪಾಯಿ ಆಗಿದೆ. ಹಾಗೆಯೇ ಮೊದಲ ಬಾರಿ 165 ರೂಪಾಯಿ ಎರಡನೇ ಬಾರಿ 250 ರೂಪಾಯಿ ಹೆಚ್ಚಳ ಮಾಡಲಾಗಿದೆ.