ಬೆಂಗಳೂರು ವಿವಿ: ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು ; ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಫೇಲ್ ಆಗಿರುವ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಬೆಂಗಳೂರು ವಿಶ್ವವಿದ್ಯಾಲಯ ಅವಕಾಶ ನೀಡಿದೆ. ಈ ಮೂಲಕ ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ಲಭಿಸಿದೆ. 2004ರಿಂದ 2017-18 ಸಾಲಿನ ಅವಧಿಯ ವಿದ್ಯಾರ್ಥಿಗಳಿಗೆ ಅವಕಾಶ ಇದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯ ಎಲ್ಲಾ ಸೆಮಿಸ್ಟರ್ ಪರೀಕ್ಷೆ ಹಾಗೂ ದೂರ ಶಿಕ್ಷಣ ಮೂಲಕ ಪದವಿ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ.