ಬೆಂಗಳೂರು ವಿವಿ ವಿದ್ಯಾರ್ಥಿಗಳ ಗಮನಕ್ಕೆ: ಪದವಿ ತರಗತಿಯ 1, 3ನೇ ಸೆಮಿಸ್ಟರ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು ವಿವಿ ವಿದ್ಯಾರ್ಥಿಗಳ ಗಮನಕ್ಕೆ: ಪದವಿ ತರಗತಿಯ 1, 3ನೇ ಸೆಮಿಸ್ಟರ್ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಬೆಂಗಳೂರು ವಿವಿಯಿಂದ ಪ್ರಸಕ್ತ ಸಾಲಿ ಪ್ರಥಮ ಮತ್ತು ಮೂರನೇ ಸೆಮಿಸ್ಟರ್ ಪರೀಕ್ಷೆಗಳಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪರಿಷ್ಕೃತ ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 9ರಿಂದ ಪರೀಕ್ಷೆ ಆರಂಭಗೊಂಡು, ಏಪ್ರಿಲ್ 6ರವರೆಗೆ ನಡೆಯಲಿದೆ.

ಅಂದಹಾಗೇ ಫೆಬ್ರವರಿ 15ರಿಂದ ಆರಂಭವಾಗ ಬೇಕಿದ್ದಂತ ಪರೀಕ್ಷೆಗಳನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇದೀಗ ಹೊಸ ಮತ್ತು ಪನರಾವರ್ತಿತ ವಿದ್ಯಾರ್ಥಿಗಳ ಬಿಎ, ಬಿವಿಎ, ಬಿಎಫ್‌ಎ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಪರಿಷ್ಕೃತ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.bangaloreuniversity.ac.in ಜಾಲತಾಣಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ.