ಬೆಂಗಳೂರು ಸೇರಿ ಏಳು ಕಡೆ ಸೆಂಟರ್ ಆಫ್ ಎಕ್ಸೆಲೆನ್ಸ್‌ಗಳನ್ನು ಸ್ಥಾಪಿಸಲು ಉದ್ದೇಶ: ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು ಸೇರಿ ಏಳು ಕಡೆ ಸೆಂಟರ್ ಆಫ್ ಎಕ್ಸೆಲೆನ್ಸ್‌ಗಳನ್ನು ಸ್ಥಾಪಿಸಲು ಉದ್ದೇಶ: ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ರಾಜ್ಯದ ಏಳು ಕಡೆ ಜಲಾನಯನ ನಿರ್ವಹಣೆ ಸಂಬಂಧ ಉತ್ಕೃಷ್ಠ ಕೇಂದ್ರ ಸ್ಥಾಪಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಶೀಘ್ರದಲ್ಲೇ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು' ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಹೆಬ್ಟಾಳದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡ ನಾಲ್ಕು ದಿನಗಳ "ಕೃಷಿ ಮೇಳ'ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಬೆಂಗಳೂರು, ಚಾಮರಾಜನಗರ, ಧಾರವಾಡ, ಗಂಗಾವತಿ, ಬಾಗಲಕೋಟೆ, ಶಿವಮೊಗ್ಗ ಸೇರಿ ಏಳು ಕಡೆ ಸೆಂಟರ್‌ ಆಫ್ ಎಕ್ಸೆಲೆನ್ಸ್‌ಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

ಇದಕ್ಕೆ ಶೇ.15ರಷ್ಟು ಸರ್ಕಾರ ಹೂಡಿಕೆ ಮಾಡಿದರೆ,

ಉಳಿದ ಶೇ. 85ರಷ್ಟು ಖಾಸಗಿ ಕಂಪನಿ ವಿನಿಯೋಗಿಸಲಿದೆ. ಇದನ್ನು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ' ಎಂದು ತಿಳಿಸಿದರು. ವಿಜ್ಞಾನಿಗಳು, ಕೃಷಿ ಪ್ರಾಧ್ಯಾಪಕರ ಕಾರ್ಯವ್ಯಾಪ್ತಿ ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗದೆ, ರೈತರ ಜಮೀನುಗಳಲ್ಲಿ ಕಾಣಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಪ್ರತಿ 15 ದಿನಗಳಿಗೊಮ್ಮೆ ಸಹಾಯಕ ಪ್ರಾಧ್ಯಾಪಕರು ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಹೇಳಿದ್ದಾರೆ.