ಬೆಂಗಳೂರು ಸೇರಿದಂತೆ ಹಲವೆಡೆ ಇನ್ನೆರಡು ದಿನ ವ್ಯಾಪಕ ಮಳೆ

ಬೆಂಗಳೂರು ಸೇರಿದಂತೆ ಹಲವೆಡೆ ಇನ್ನೆರಡು ದಿನ ವ್ಯಾಪಕ ಮಳೆ

ಇಂದು (ನ.23)-ನಾಳೆ (ನ.24) ಬೆಂಗಳೂರು, ಕರಾವಳಿ, ಮಲೆನಾಡು & ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಇಂದಿನಿಂದ 2 ದಿನ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಭಾರೀ ಮಳೆಯ ಹಿನ್ನೆಲೆ ಇನ್ನೆರಡು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದ.ಕ., ಉಡುಪಿ, ಉ.ಕ. ಸೇರಿ ಇತರ ಜಿಲ್ಲೆಗಳಲ್ಲಿ 2 ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.