ಬೆಂಗಳೂರು: ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಮೋದಿ ಮಾಲಾರ್ಪಣೆ

ಬೆಂಗಳೂರು: ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಮೋದಿ ಮಾಲಾರ್ಪಣೆ

ಬೆಂಗಳೂರು ; ನವೆಂಬರ್ 11: ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆ ಕಳೆದ ಆರು ತಿಂಗಳಿನಲ್ಲಿ ಮೂರನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ನಗರದ ಶಾಸಕರ ಭವನದ ಮುಂಭಾಗದಲ್ಲಿರುವ ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಶಾಸಕರ ಭವನದ ಬಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ಗಣ್ಯರು ಸೇರಿ ಸ್ವಾಗತ ಕೋರಿದರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸ್ವೀಕರ್ ಕಾಗೇರಿ, ಪ್ರಸನ್ನಾನಂದಪುರಿ ಸ್ವಾಮೀಜಿ, ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಸಚಿವ ಶ್ರೀರಾಮುಲು, ಎಂ.ಟಿ.ಬಿ ನಾಗರಾಜ್ ಹಾಜರಿದ್ದರು.

ಕನಕದಾಸರ ಪ್ರತಿಮೆ, ವಾಲ್ಮೀಖಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಶಾಸಕರ ಭವನದ ಮುಂದೆ ಕಾದು ನಿಂತಿದ್ದ ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಕೈ ಬೀಸಿದರು. ಈ ವೇಳೆ ಮೋದಿ ಹಾಗೂ ಬಿಜೆಪಿ ಪರವಾಗಿ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು. ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಮೋದಿ ಮಾಲಾರ್ಪಣೆ