ಬೆಂಗಳೂರು: ಫೆ.27ರಂದು ಬೆಳಗಾವಿಯಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಗುಜರಾತ್ ನಂತರ, ಈಗ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ನಡೆಯಲಿರುವ ಕರ್ನಾಟಕದಲ್ಲೂ ನಿಯಮಿತವಾಗಿ ರೋಡ್ ಶೋಗಳನ್ನು ನಡೆಸಲು ನಿರ್ಧರಿಸಿದ್ದಾರೆ. ಮೂಲಗಳ ಪ್ರಕಾರ, ಫೆಬ್ರವರಿ 27 ರಂದು ರಾಜಕೀಯವಾಗಿ ನಿರ್ಣಾಯಕವಾದ ಬೆಳಗಾವಿ ನಗರದಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ
ಇದು 10 ಕಿಲೋಮೀಟರ್ ರೋಡ್ ಶೋ ನಡೆಯಲಿದೆ. ಮೂಲಗಳ ಪ್ರಕಾರ, ಮೋದಿ ಫೆಬ್ರವರಿ 27 ರಂದು ಬೆಳಗಾವಿ ಮತ್ತು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಚೆನ್ನಮ್ಮ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬೆಳಗಾವಿ ರೋಡ್ ಶೋ ನಡೆಸಲು ಉದ್ದೇಶಿಸಲಾಗಿದೆ. ಇದು ಎಲ್ಲಾ ಪ್ರಮುಖ ರಸ್ತೆಗಳ ಮೂಲಕ ಸಾಗಿ ಮಾಲಿನಿ ನಗರದಲ್ಲಿ ಕೊನೆಗೊಳ್ಳುತ್ತದೆ" ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಪೂರ್ಣಕುಂಭದೊಂದಿಗೆ ಮೋದಿ ಅವರನ್ನು ಸ್ವಾಗತಿಸಲಾಗುವುದು. 10 ಸಾವಿರ ಮಹಿಳೆಯರು ಪೂರ್ಣಕುಂಭ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ರಾಜ್ಯ ಘಟಕವು ಮೋದಿಯನ್ನು ಅವಲಂಬಿಸಿದೆ.