ಬೆಂಗಳೂರು: ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ಪಡೆ ಸಿದ್ಧತೆಯಲ್ಲಿ ಸಚಿವ ನಾರಾಯಣ ಗೌಡ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ನಾರಾಯಣ ಗೌಡ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ.
ಮೂಲಗಳ ಪ್ರಕಾರ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅವರು ಕೆ.ಆರ್.ಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ.