ಬೆಂಗಳೂರು: ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ

ಬೆಂಗಳೂರು: ಇತರ ರಾಜ್ಯಗಳಲ್ಲಿ ಮೋದಿ ಮತ್ತು ಅಮಿತ್ ಶಾ ಅವರು ಕಾಂಗ್ರೆಸ್ ಅನ್ನು ಸೋಲಿಸಲು ಬಳಸಿದ ತಂತ್ರಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಬಳಕೆ ಮಾಡುತ್ತಿದ್ದಾರೆ.
ಪಕ್ಷವು ದುರ್ಬಲವಾಗಿರುವಲ್ಲಿ ಬಿಜೆಪಿಯನ್ನು ಸೋಲಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಬಿಜೆಪಿ ನಾಯಕರನ್ನು ಸೆಳೆಯುವುದು ಕಾಂಗ್ರೆಸ್ ಅಳವಡಿಸಿಕೊಂಡ ಇತ್ತೀಚಿನ ತಂತ್ರವಾಗಿದೆ.
ಇದಕ್ಕೆ ಇತ್ತೀಚಿನ ಉದಾಹರಣೆಯೆಂದರೆ ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು. ಇತ್ತೀಚೆಗೆ ಲಿಂಬಿಕಾಯಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬೆಳಗಾವಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದರು.
ಲಿಂಬಿಕಾಯಿ ಅವರು ಬಿಜೆಪಿ ನಾಯಕ ಬಿಎಸ್ವೈಗೆ ಬಹಳ ಆಪ್ತರು ಎಂದು ಪರಿಗಣಿಸಲಾಗಿದೆ. ಧಾರವಾಡದಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ವಿರುದ್ಧ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಅರವಿಂದ ಬೆಲ್ಲದ್ ಅವರು ಯಡಿಯೂರಪ್ಪ ವಿರೋಧಿ ಶಾಸಕ ಎಂದೇ ಖ್ಯಾತರಾಗಿದ್ದಾರೆ.