ಬೆಂಗಳೂರು: ಬಜೆಟ್ ಮಂಡನೆಗೂ ಮುನ್ನ ಸಿಎಂ ದೇವಳ ಭೇಟಿ

ಬೆಂಗಳೂರು: ಬಜೆಟ್ ಮಂಡನೆಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಆರ್.ಟಿ. ನಗರದಲ್ಲಿರುವ ಶ್ರೀಕಂಠೇಶ್ವರ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಿಎಂಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಸಾಥ್ ನೀಡಿದರು. ನಂತರ 7 ಮಿನಿಸ್ಟರ್ ಕ್ವಾರ್ಟಸ್ ಬಳಿಯಿರುವ ಆಂಜನೇಯ ದೇವಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ರಾಜ್ಯದ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ಸುದ್ದಿಗಾರರರಿಗೆ ವಿವರಿಸಿದರು.