ಬೆಳಗಾವಿ ಜಿಲ್ಲಾ ಕೋರ್ಟ್ ನೇಮಕಾತಿ : ಜವಾನ, ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ
ಬೆಳಗಾವಿ: ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 68 ಸ್ಟೆನೋಗ್ರಾಫರ್ ಗ್ರೇಡ್ 3, ಜವಾನ, ಪ್ರೊಸೆಸ್ ಸರ್ವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ನ್ಯಾಯಾಲಯ ನೇಮಕಾತಿ 2023 ಗೆ ಅಧಿಕೃತ ವೆಬ್ಸೈಟ್ ಬೆಳಗಾವಿ ಕೋರ್ಟ್ ಜಾಬ್ಸ್ ಮೂಲಕ ಮಾರ್ಚ್ 3, 2023 ರೊಳಗೆ ಅರ್ಜಿ ಸಲ್ಲಿಸಬಹುದುವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.
ಬೆಳಗಾವಿ ನ್ಯಾಯಾಲಯ ಖಾಲಿ ಹುದ್ದೆಗಳ ಅಧಿಸೂಚನೆ/ ಜಾಹೀರಾತಿನ ಸಂಕ್ಷಿಪ್ತ ವಿವರಣೆ ಇಲ್ಲಿದೆ:
ಶೈಕ್ಷಣಿಕ ಅರ್ಹತೆಗಳು : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯ/ ಸಂಸ್ಥೆಯಿಂದ 8, 10ನೇ ತರಗತಿ, ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ರಿಂದ ಗರಿಷ್ಟ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ವಯೋಮಿತಿ ಸಡಿಲಿಕೆ: ಎಸ್ಸಿ/ಎಸ್ಟಿ/ಒಬಿಸಿ/ಪಿಡಬ್ಲ್ಯೂಡಿ/ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾವಳಿಯಂತೆ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 09.02.2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 03.03.2023