ಬೆಳಗಾವಿ ಸುವರ್ಣಸೌಧದಲ್ಲೂ ಕನ್ನಡದ ಕಂಪನ; ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ

ಬೆಳಗಾವಿ ಸುವರ್ಣಸೌಧದಲ್ಲೂ ಕನ್ನಡದ ಕಂಪನ; ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ

ಬೆಳಗಾವಿ: ತಾಲೂಕಿನ ಸುವರ್ಣ ಸೌಧದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ , ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಭಿವೃದ್ಧಿಗಾಗಿ ಆಧುನಿಕ ವಾತಾವರಣಕ್ಕೆ ಒಗ್ಗಬೇಕಾಗುತ್ತದೆ. ಆದರೆ ಅದೇ ಕಾರಣಕ್ಕಾಗಿ ನಾಡು, ನುಡಿ, ಸಂಸ್ಕೃತಿ ಮರೆತು ಮೂಢರಾಗದೇ ನಮ್ಮತನದ ಅಭಿಮಾನವನ್ನು ಮೆರೆಯಲೇಬೇಕಿದೆ ಎಂದು ಅಭಿಪ್ರಾಯಪಟ್ಟರು.

ಮಗುವಿಗೆ ಎದೆಹಾಲು ಕುಡಿಸಲಾರಳು ಆಧುನಿಕ ತಾಯಿ ಇವಳಯ್ಯ. ಬಾಟಲಿ ಹಾಲು ಕುಡಿಸಿ ಚಾಕಲೇಟ್ ತಿನ್ನಿಸಿ ಪಾಪ್ ಸಾಂಗ್ ಹಾಡುವಳಯ್ಯ. ಆಕೆ ಎಲ್ಲೇ ಇದ್ದರೂ, ಹೇಗೆ ಇದ್ದರೂ ಪ್ರತಿ ತಾಯಿಯೂ ಕನ್ನಡತಿಯೇ ಆಗಿರಬೇಕು ಎಂದರು. ಇದೇ ವೇಳೆ ಮಾತನಾಡಿದ ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ನಾಡು, ನುಡಿ ವಿಚಾರವಾಗಿ ಅಭಿಮಾನ ಬರೀ ಕೂಗಾಟ, ಪ್ರತಿಭಟನೆಗೆ ಸೀಮಿತವಾಗಬಾರದು. ಬದಲಾಗಿ ಪ್ರತಿ ಕ್ಷಣವೂ ಅದನ್ನು ಜೀವಿಸಬೇಕು ಎಂದು ಹೇಳಿದರು.