ಬೆಳಗಾವಿಯ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ..!?
ಬೆಳಗಾವಿ : ಬಿಜೆಪಿಯಲ್ಲಿ ಮತ್ತೊಂದು ವಿಕೆಟ್ ಪತನವಾಗುತ್ತಿದ್ದು, ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದೀಗ ಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಭರ್ಜರಿ ರಣತಂತ್ರ ರೂಪಿಸಲು ಮುಂದಾಗಿದ್ದಾರೆ.
ವಿಧಾನ ಸಭೆ ಚುನಾವಣೆ ಹೊತ್ತಲ್ಲೇ ಸಾಲು ಸಾಲು ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ನಾಯಕರು ಗುಡ್ಬೈ ಹೇಳುತ್ತಿರುವುದರಿಂದ ಬಿಜೆಪಿ ಮೇಲೆ ಭಾರೀ ಹೊಡೆತ ಬೀಳಲಿದೆ. ಇದೀಗ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಟೆಂಪಲ್ ರನ್ ಶುರು ಮಾಡಿದ್ದಾರೆ.
ಈ ಸಂಧರ್ಭದಲ್ಲಿ ಅಕ್ಕಪಕ್ಕದ ನಿವಾಸಿಗಳ ಮನೆಗಳಿಗೂ ತೆರಳಿ ಸ್ಪರ್ಧೆ ಮಾಡುವ ವಿಚಾರ ತಿಳಿಸಿದ್ದಾರೆ. ಬಿಜೆಪಿ ಬಂಡಾಯ ಎದ್ದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ನುಂಗಲಾರದ ಬಿಸಿ ತುಪ್ಪದಂತಹ ಪರಿಸ್ಥಿತಿ ನಿರ್ಮಾಣವಾಗಿದಂತೂ ನಿಜ. ಮುಂದಿನ ದಿನಗಳಲ್ಲಿ ಯಾರೆಲ್ಲ ಬಿಜೆಪಿ ರಾಜೀನಾಮೆ ನೀಡುತ್ತಾರೆ ಅನ್ನೋದನ್ನು ಕಾದು ನೋಡಬೇಕಾಗಿದೆ.