ಬೆಳಗಾವಿಯ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಸ್ಪೀಕರ್ ಆದೇಶ

ಬೆಳಗಾವಿಯ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಸ್ಪೀಕರ್ ಆದೇಶ

ಬೆಳಗಾವಿ: ಇಂದು ರಾಜ್ಯ ಸರ್ಕಾರದ ಮಹತ್ವದ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡಿದ್ದಾರೆ. ಇದರ ಬೆನ್ನಲ್ಲೇ, ಬೆಳಗಾವಿಯ ಸುವರ್ಣ ಸೌಧದ ಒಳಗೆ ಮಾಧ್ಯಮಗಳ ಪ್ರತಿನಿಧಿಗಳಿಗೆ ಅವಕಾಶ ನೀಡದಂತೆ ಸ್ಪೀಕರ್ ಸೂಚಿಸಿದ್ದಾರೆ. ಈ ಮೂಲಕ ಬೆಳಗಾವಿಯ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದ ಚಳಿಗಾಲದ ವಿಧಾನಮಂಡಲದ ಅಧಿವೇಶನದ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿದೆ. ನಿನ್ನೆ ಭೋಜನದ ವಿರಾಮದ ಬಳಿಕ ಮಹತ್ವದ ಮತಾಂತರ ನಿಷೇಧ ವಿಧೇಯಕವನ್ನು ಸರ್ಕಾರ ಮಂಡಿಸಲಾಗಿದೆ. ಇಂದು ವಿಧೇಯಕದ ಮೇಲಿನ ಚರ್ಚೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಹಿನ್ನಲೆಯಲ್ಲಿ ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆಯ ಹಿನ್ನಲೆಯಲ್ಲಿ, ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸ್ಪೀಕರ್ ಅವರು ಮಾರ್ಷಲ್ ಗಳಿಗೆ ಸುವರ್ಣ ಸೌಧ ಪ್ರವೇಶಕ್ಕೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಲು ಸೂಚಿಸಿರುವ ಕಾರಣ, ಸುವರ್ಣಸೌಧದ ಗೇಟ್ ಬಳಿಯಲ್ಲಿಯೇ ಮಾಧ್ಯಮಗಳನ್ನು ತಡೆದು ನಿಲ್ಲಿಸಲಾಗಿದೆ. ಮಾಧ್ಯಮ ಪ್ರತಿನಿಧಿಗಳನ್ನು ಮಾರ್ಷಲ್ ಗಳು ಒಳಗೆ ಬಿಡದಂತೆ ತಡೆದು ನಿಲ್ಲಸಿದ ಕಾರಣ, ಹೊರಗೆ ಇರುವಂತೆ ಆಗಿದೆ.