ಬೆಳಗಾವಿಯಲ್ಲಿ 'ಕರವೇ' ಕಿಚ್ಚು; ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಬೆಳಗಾವಿಯ ಹಿರೇಬಾಗೇವಾಡಿ ಬಳಿಯ ಹೆದ್ದಾರಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರದಿಂದ ಬರುತ್ತಿರುವ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೆಲವೊಂದು ಲಾರಿಗಳ ಮೇಲೆ ಕಪ್ಪು ಮಸಿ ಬಳಿದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.