ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್

ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಸಾರಿಗೆ ಬಸ್

ಬೆಳಗಾವಿ: ಇಲ್ಲಿನ ಹತ್ತರಕಿ ಟೋಲ್ ಬಳಿಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ವೊಂದರಲ್ಲಿ ( KSRTC Bus ) ಕಾಣಿಸಿಕೊಂಡ ಬೆಂಕಿ, ಕ್ಷಣ ಮಾತ್ರದಲ್ಲಿ ಇಡೀ ಬಸ್ಸಿಗೆ ವ್ಯಾಪಿಸಿದೆ. ನಡು ರಸ್ತೆಯಲ್ಲೇ ಬಸ್ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ.

ಆದ್ರೇ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.

ಬೆಳಗಾವಿಯ ಸಂಕೇಶ್ವರ ಡಿಪೋಗೆ ಸೇರಿದಂತೆ ಬಸ್, ಸಂಕೇಶ್ವರದಿಂದ ಬೆಳಗಾವಿಗೆ ತೆರಳುತ್ತಿತ್ತು. ರಾಷ್ಟ್ರೀಯ ಹೆದದ್ರಿ 4ರ ಹತ್ತರಕಿ ಟೋಲ್ ಬಳಿಯಲ್ಲಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದಂತ ಚಾಲಕ ಹಾಗೂ ನಿರ್ವಾಹಕರು ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನೆಲ್ಲಾ ಕೆಳಗೆ ಇಳಿಸಿದ್ದಾರೆ.

ಪ್ರಯಾಣಿಕರು ಕೆಳಗೆ ಇಳಿದ ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಬಸ್ಸಿಗೆ ಬೆಂಕಿ ಆವರಿಸಿದೆ. ಈ ಮೂಲಕ ನಡು ರಸ್ತೆಯಲ್ಲಿಯೇ ಹೊತ್ತಿ ಉರಿದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು, ಬಸ್ ನ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.