ಬೆಳಗಾವಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ದಾಖಲೆ ಇಲ್ಲದ 2 ಕೋಟಿ ಹಣ ಜಪ್ತಿ
ಬೆಳಗಾವಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇದೀಗ ಬೆಳಗಾವಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 2 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ಬಳಿ ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ತಪಾಸಣೆ ಮಾಡಲಾಗಿದ್ದು ಬಸ್ನಲ್ಲಿದ್ದ 2 ಕೋಟಿ ಹಣ ಜಪ್ತಿ ಮಾಡಲಾಗಿದೆ.
ಸದ್ಯಕ್ಕೆ ಪೊಲೀಸರು ಅನಧಿಕೃತ ಹಣದ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂಧರ್ಭಿಕ ಚಿತ್ರ