ಬೆಳಗಾವಿಯಲ್ಲಿ ಮರಾಠಿ ಭಾಷಿಕ ಪುಂಡರ ಹಾವಳಿ; ವಾಹನದ ಮೇಲೆ ಕಲ್ಲು ತೂರಾಟ

ಬೆಳಗಾವಿಯಲ್ಲಿ ಮರಾಠಿ ಭಾಷಿಕ ಪುಂಡರ ಹಾವಳಿ; ವಾಹನದ ಮೇಲೆ ಕಲ್ಲು ತೂರಾಟ

ಬೆಳಗಾವಿ: ಜಿಲ್ಲೆಯಲ್ಲಿ ಮರಾಠಿ ಭಾಷಿಕ ಪುಂಡರು ಪುಂಡಾಟ ಮೆರೆದಿದ್ದಾರೆ. ಅಧಿವೇಶನದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕರ್ನಾಟಕ ಸರ್ಕಾರಿ ವಾಹನ ಮೇಲೆ ಕಲ್ಲು ತೂರಿ ವಿಕೃತಿ ಮೆರೆದಿದ್ದಾರೆ.

ತಾಲೂಕಿನ ಹೊರವಲಯದ ಸುವರ್ಣಸೌಧದ ಬಳಿ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸರ್ಕಾರಿ ವಾಹನದ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಸೇರಿದ ಕರ್ನಾಟಕ ಸರ್ಕಾರ ಎದು ಬರೆದ ವಾಹನ ಅಡ್ಡಗಟ್ಟಿ, ಕಲ್ಲು ತೋರಿ ವಿಕೃತಿ ಮೆರೆದಿದ್ದಾರೆ.

ಅಷ್ಟೇ ಅಲ್ಲದೇ ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ವಾಹನ ಚಾಲಕ ಚೇತನ್ ಎಂಬುವವರಿಗೂ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ.ಈ ವೇಳೆ ವಾಹನ ಚಾಲಕ ಅವರಿಂದ ತಪ್ಪಿಸಿಕೊಂಡು ತಕ್ಷಣವೇ ವಾಹನ ಚಲಾಯಿಸಿಕೊಂಡು ಪುಂಡರಿಂದ ತಪ್ಪಿಸಿಕೊಂಡು ಹೋಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.