ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಬಸವರಾಜ ಹೊರಟ್ಟಿ ಪರಿಶೀಲನೆ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಬಸವರಾಜ ಹೊರಟ್ಟಿ ಪರಿಶೀಲನೆ

ಬೆಳಗಾವಿ: ಇಲ್ಲಿ‌ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಕಲಾಪವನ್ನು ವೆಬ್‌ಕ್ಯಾಸ್ಟಿಂಗ್ ಮೂಲಕ ನೇರಪ್ರಸಾರ ಮಾಡುವುದಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿದರು.

ಅಧಿಕಾರಿಗಳ ಸಭೆ ನಡೆಸಿ, ನೇರಪ್ರಸಾರಕ್ಕೆ ಕೈಗೊಳ್ಳಲು ಉದ್ದೇಶಿಸಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

ವಿಧಾನಸಭೆ ಕಾರ್ಯದರ್ಶಿ ಮಹಾಲಕ್ಷ್ಮಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಎಸ್ಪಿ ಲಕ್ಷ್ಮಣ ನಿಂಬರಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.