ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ಮಾಡಿ ಆದೇಶ

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ಬೆಳೆ ನಷ್ಟಕ್ಕೆ ದುಪ್ಪಟ್ಟು ಪರಿಹಾರ ಗರಿಷ್ಠ 1 ಲಕ್ಷ ರೂ. ನೀಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ.

ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50,000 ರೂ.ನಿಂದ 1 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದರಿಂದ ರೈತರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ.

ಕಾಡು ಪ್ರಾಣಿಗಳಿಂದ ಉಂಟಾಗುವ ಜಾನುವಾರುಗಳ ಪ್ರಾಣ ಹಾನಿ ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಇದಕ್ಕೆ ಸ್ಪಂದಿಸುವ ಮೂಲಕ ಸರ್ಕಾರ ಮತ್ತು ಅರಣ್ಯ ಇಲಾಖೆ ಗ್ರಾಮೀಣ ಜನರಿಗೆ ಸಹಾಯ ಮಾಡಿವೆ. ತೆಂಗು, ಮಾವು, ಭತ್ತ, ರಾಗಿ, ಅಡಿಕೆ, ಟೊಮೆಟೊ ಸೇರಿದಂತೆ 64 ಬೆಳೆಗಳ ಪರಿಹಾರದ ಗರಿಷ್ಠ ಮೊತ್ತವನ್ನು 50 ಸಾವಿರದಿಂದ ಒಂದು ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.