ಬೆಳ್ತಂಗಡಿ| ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿಯ ಬಂಧನ

ಸುಧೀರ್
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸುಧೀರ್ ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಕಡಿರುದ್ಯಾವರ ಗ್ರಾಮದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ.
ಈ ಪ್ರಕರಣದಲ್ಲಿ ಶಾಮೀಲಾಗಿರುವ ಕಡಿರುದ್ಯಾವರ ಕೊಪ್ಪದ ಗಂಡಿಯ ಮನೋಹರ ಹಾಗೂ ಮಂಗಳೂರು ಕೊಣಾಜೆಯ ಮಾಧವ ಯಾನೆ ಮಾಧು ಎಂಬ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಮುಖ ಆರೋಪಿ ಸುಧೀರನನ್ನು ಜ.17 ರಂದು ಬಂಧಿಸಲಾಗಿದೆ.