ಬೇರೆ ಪಕ್ಷಗಳ ಜೊತೆಗೆ ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆಕೊಟ್ಟ : ಮಾಜಿ ಪ್ರಧಾನಿ ಹೆಚ್ಡಿಡಿ

ಬೆಂಗಳೂರು: ಬೇರೆ ಪಕ್ಷಗಳ ಜೊತೆಗೆ ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ಹೇಳಿಕೆಯನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ್ರು ನೀಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯ ವೇಳೆಯುಲ್ಲಿ ನಾವು ಯಾವುದೇ ರೀತಿಯಲ್ಲಿ ಯಾರೊಂದಿಗೂ ನಾವು ಮೈತ್ರಿಯನ್ನು ಮಾಡಿಕೊಳ್ಳುವುದಿಲ್ಲ, ಅಂತ ಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಇನ್ನೂ ಕಾಂಗ್ರೆಸ್ ಎಂಎಲ್ಸಿ ಸಿಎಂ ಇಬ್ರಾಹಿಂ ತಮ್ಮ ಪಾರ್ಟಿ ಸೇರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ಬಗ್ಗೆ ಹಲವು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ, ಆದ್ರೆ ಈ ಬಗ್ಗೆ ಯಾರು ಕೂಡ ನನ್ನ ಬಳಿ ಬಂದು ಮಾತನಾಡಿಲ್ಲ ಅಂತ ಹೇಳಿದರು.ಇನ್ನೂ ಲ್ಲಾ ಮುಖಂಡರ ಜೊತೆ ಚರ್ಚೆ ಮಾಡಿ ಸಿಎಂ ಇಬ್ರಾಹಿಂ ಪಕ್ಷ ಸೇರುವ ಬಗ್ಗೆ ನಿರ್ಧಾರ ಮಾಡಲಾಗುವುದು ಅಂತ ಅವರು ತಿಳಿಸಿದರು.