ಬೇಲೂರು ಕೈಗಾರಿಕೆ ಪ್ರದೇಶದಲ್ಲಿ ಅಗ್ನಿ ಅವಘಡ

ಧಾರವಾಡದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕೆ ಪ್ರದೇಶದಲ್ಲಿನ ರಾಜೇಶ ಜಿನ್ನಿಂಗ್ ಹತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಹತ್ತಿ ಅಂಡಿಗೆಗಳು ಸುಟ್ಟು ಕರಕಲಾಗಿರುವ ಘಟನೆಯೊಂದು ಸಂಭವಿಸಿದೆ.
ಈ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ರು. ಈ ಅವಘಡದಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಹತ್ತಿ ಕಾರ್ಖಾನೆ ಮಾಲೀಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.ಇನ್ನು ಈ ಕುರಿತು ಗರಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.