ಬ್ರೆಜಿಲ್ ಗಲಭೆ ಬಗ್ಗೆ ಪ್ರಧಾನಿ ಮೋದಿ ಬೇಸರ ವ್ಯಕ್ತ

ಬ್ರೆಜಿಲ್ ಗಲಭೆ ಬಗ್ಗೆ ಪ್ರಧಾನಿ ಮೋದಿ ಬೇಸರ ವ್ಯಕ್ತ

ನವದೆಹಲಿ: ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಗಲಭೆಗಳ ಬಗ್ಗೆ ಪ್ರಧಾನಿ ಮೋದಿ ಅವರು ಇಂದು ಕಳವಳ ವ್ಯಕ್ತಪಡಿಸಿದ್ದಾರೆ. 'ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು' ಎಂದು ಒತ್ತಿ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಸರ್ಕಾರಿ ಅಧಿಕಾರಿಗಳಿಗೆ ಬೆಂಬಲವನ್ನೂ ನೀಡಿದ್ದಾರೆ. ಬ್ರೆಜಿಲ್ ಅಧಿಕಾರಿಗಳಿಗೆ ನಾವು ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ' ಎಂದು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಮೋದಿ ಟ್ಯಾಗ್ ಮಾಡಿ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.