ಭತ್ಯೆ, ನಿವೃತ್ತಿ ವಯಸ್ಸು, ಪಿಂಚಣಿ ಪರಿಶೀಲನೆ

ಸರ್ಕಾರ ರಚನೆ ಮಾಡಿರುವ 7ನೇ ರಾಜ್ಯ ವೇತನ ಆಯೋಗ ತನ್ನ ಪರಿಶೀಲನಾರ್ಹ ಅಂಶಗಳ ಮೇಲೆ ವರದಿಯನ್ನು ಸಲ್ಲಿಸಬೇಕಾಗಿದೆ.
ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ತಿನ ಸದಸ್ಯರು ಮತ್ತು ಇತರೆ ಪ್ರಮುಖ ಚುನಾಯಿತ ಪ್ರತಿನಿಧಿಗಳಿಂದಲೂ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಮತ್ತು ಮುಖ್ಯಸ್ಥರನ್ನೊಳಗೊಂಡಂತೆ ಹಿರಿಯ ಅಧಿಕಾರಿಗಳಿಂದಲೂ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ.
ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪ್ರಶ್ನಾವಳಿ 'ಎ' ನಮೂನೆಯಲ್ಲಿ ಉತ್ತರಗಳನ್ನು ಒದಗಿಸಬೇಕಾಗುತ್ತದೆ. ಪ್ರಶ್ನಾವಳಿ 'ಬಿ' ಮತ್ತು 'ಸಿ' ನಮೂನೆಗಳು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಮತ್ತು ಇಲಾಖಾ ಮುಖ್ಯಸ್ಥರುಗಳು ಉತ್ತರಗಳನ್ನು ನೀಡುವ ಉದ್ದೇಶಕ್ಕೆ ಇದೆ. ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳು ಪ್ರಶ್ನಾವಳಿ 'ಡಿ', 'ಇ', 'ಎಫ್' ಗಳಲ್ಲಿ ಕ್ರಮವಾಗಿ ಉತ್ತರಗಳನ್ನು ನೀಡಬೇಕಾಗುತ್ತದೆ. ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪ್ರಶ್ನಾವಳಿ 'ಜಿ' ನಮೂನೆಯಲ್ಲಿ ಆಹ್ವಾನಿಸಲಾಗಿದೆ.
ವ್ಯಕ್ತಿಗಳು, ಮಾನ್ಯತೆ ಪಡೆದ ನೌಕರರ ಮತ್ತು ಪಿಂಚಣಿದಾರರ ಸಂಘಗಳು, ಸಂಘ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳು ಅಥವಾ ಇನ್ನಿತರ ಆಸಕ್ತಿಯುಳ್ಳ ವ್ಯಕ್ತಿಗಳು ಅಭಿಪ್ರಾಯಗಳನ್ನು ಪ್ರಶ್ನಾವಳಿ 'ಎ' ಮತ್ತು 'ಜಿ' ನಮೂನೆಗಳಲ್ಲಿ ಸಲ್ಲಿಸಬಹುದಾಗಿದೆ. ಪ್ರತಿಕ್ರಿಯೆ ನೀಡುವವರು ಅವರ ಸಂಪೂರ್ಣ ಅಂಚೆ ವಿಳಾಸ, ಇ-ಮೇಲ್ ವಿಳಾಸ ಮತ್ತು ಸಂಪರ್ಕಿಸುವ ದೂರವಾಣಿ ಸಂಖ್ಯೆಯ ವಿವರಗಳನ್ನು ನೀಡಬೇಕು.