ಭಯೋತ್ಪಾದನಾ ದಾಳಿ: ರಾಜೌರಿ ಹಾಗೂ ಪೂಂಚ್‌ನಲ್ಲಿ 1,800 ಸೈನಿಕರ ನಿಯೋಜನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಹಾಗೂ ಪೂಂಚ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಹೆಚ್ಚಿನ ಸೈನಿಕರನ್ನು ನಿಯೋಜಿಸಲು ಕೇಂದ್ರ ನಿರ್ಧರಿಸಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಮೂಲಗಳು ಹೇಳುವಂತೆ ಸಿಆರ್‌ಪಿಎಫ್‌ನ (ಕೇಂದ್ರ ಮೀಸಲು ಪೊಲೀಸ್ ಪಡೆ) ಸುಮಾರು 1,800 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಭಾನುವಾರ ಸಂಜೆ ಮತ್ತು ಸೋಮವಾರ ಬೆಳಗ್ಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಭದ್ರತೆಯ ದೃಷ್ಟಿಯಿಂದ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿವೆ.