ಭಾರತ-ಬಾಂಗ್ಲಾ 3ನೇ ಏಕದಿನ ಪಂದ್ಯ; ಒತ್ತಡದಲ್ಲಿ ಟೀಂ ಇಂಡಿಯಾ

ಭಾರತ & ಬಾಂಗ್ಲಾ ನಡುವಿನ ಏಕದಿನ ಸರಣಿಯ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಇಂದು ಚಿತ್ತಗಾಂಗ್‍ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆಯಲಿದೆ. ಪಂದ್ಯ ಬೆಳಗ್ಗೆ 11.30ಕ್ಕೆ ಆರಂಭವಾಗಲಿದ್ದು, ವೈಟ್‍ವಾಷ್ ಮುಖಭಂಗ ತಪ್ಪಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಟೀಂ ಇಂಡಿಯಾ ಸಿಲುಕಿದೆ. ಇಂಜುರಿಯಿಂದಾಗಿ ನಾಯಕ ರೋಹಿತ್ ಶರ್ಮಾ ಹೊರಗುಳಿದಿದ್ದು, ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಕುಲ್ದೀಪ್ ಯಾದವ್ ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿದ್ದಾರೆ.