ಭಾರತ-ಚೀನಾ ಘರ್ಷಣೆ ಹಿನ್ನೆಲೆ: ಅರುಣಾಚಲ ಪ್ರದೇಶದಲ್ಲಿ ಗಸ್ತು ಆರಂಭಿಸಿದ ಭಾರತೀಯ ವಾಯುಪಡೆ
ನವದೆಹಲಿ: ಕಳೆದ ಕೆಲವು ದಿನಗಳ ಹಿಂದೆ ನಡೆದ ಭಾರತ-ಚೀನಾ ಘರ್ಷಣೆ ಬೆನ್ನಲ್ಲೇ, ಭಾರತೀಯ ವಾಯುಪಡೆ (ಐಎಎಫ್) ಅರುಣಾಚಲ ಪ್ರದೇಶದ ಮೇಲೆ ಸಕ್ರಿಯ ಯುದ್ಧ ಗಸ್ತು ಆರಂಭಿಸಿದೆ ಎಂದು ಮೂಲಗಳು ಇಂದು ತಿಳಿಸಿವೆ.
ಚೀನಾದಿಂದ ವಾಯುಪ್ರದೇಶದ ಉಲ್ಲಂಘನೆಯನ್ನು ತಡೆಯಲು ಈ ಗಸ್ತು ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಘರ್ಷಣೆಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರನ್ನು ಇಂದು ಭೇಟಿಯಾಗಿ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ಈ ವೇಳೆ, ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ, ಗಿರಿಧರ್ ಅರಮನೆ ಕೂಡ ಉಪಸ್ಥಿತರಿರುವರು