ಭಾರತದ ಅಥ್ಲೀಟ್ ಅಂಜು ಬಾಬಿ ಜಾರ್ಜ್‍ಗೆ 'ವರ್ಷದ ಮಹಿಳೆ' ಪ್ರಶಸ್ತಿ

ಮೊನಾಕೊ: ವರ್ಲ್ಡ್ ಅಥ್ಲೆಟಿಕ್ಸ್ ಭಾರತದ ಲೆಜೆಂಡರಿ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಅವರನ್ನು 'ವರ್ಷದ ಮಹಿಳೆ' ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.
ಭಾರತದಲ್ಲಿ ಕ್ರೀಡೆಯನ್ನು ಮುನ್ನಡೆಸಲು ಅವರ ಪ್ರಯತ್ನಗಳು ಮತ್ತು ಅವರ ಹೆಜ್ಜೆಗಳನ್ನು ಅನುಸರಿಸಲು ಹೆಚ್ಚಿನ ಮಹಿಳೆಯರನ್ನು ಪ್ರೇರೇಪಿಸುವ ಮೂಲಕ ಈ ವರ್ಷದ ಪ್ರಶಸ್ತಿಗೆ ಅಂಜು ಬಾಬಿ ಹೆಚ್ಚು ಅರ್ಹರಾಗಿದ್ದಾರೆ.
ವಿಶ್ವ ಅಥ್ಲೆಟಿಕ್ಸ್‌ನಿಂದ ವರ್ಷದ ಮಹಿಳೆ ಪ್ರಶಸ್ತಿಯನ್ನು ಪಡೆದಿರುವುದು ನಿಜವಾಗಿಯೂ 'ವಿನಮ್ರ ಮತ್ತು ಗೌರವ" ಎಂದು ಅಂಜು ಹೇಳಿದ್ದಾರೆ. "ಪ್ರತಿದಿನ ಬೆಳಿಗ್ಗೆ ಎದ್ದು ಮತ್ತೆ ಕ್ರೀಡಾಲೋಕಕ್ಕೆ ಹಿಂತಿರುಗಿಸುವುದಕ್ಕಿಂತ ಉತ್ತಮವಾದ ಭಾವನೆ ಇನ್ನೊಂದಿಲ್ಲ, ಇದು ಯುವತಿಯರನ್ನು ಸಕ್ರಿಯಗೊಳಿಸಲು ಮತ್ತು ಸಶಕ್ತಗೊಳಿಸಲು ಅನುವು ಮಾಡಿಕೊಡುತ್ತದೆ! ನನ್ನ ಪ್ರಯತ್ನವನ್ನು ಗುರುತಿಸಿದ್ದಕ್ಕಾಗಿ ಧನ್ಯವಾದಗಳು' ಎಂದು ಟ್ವೀಟ್ ಮಾಡಿದ್ದಾರೆ. ಜತೆಗೆ ವರ್ಚುವಲ್ ಸಭೆಯಲ್ಲಿ ತಾವು ಭಾಗವಹಿಸಿದ ಫೋಟೋ ಹಾಗೂ ಪ್ರಶಸ್ತಿಯ ಪ್ರಮಾಣ ಪತ್ರವನ್ನು ಟ್ವೀಟ್ ಕೂಡ ಮಾಡಿದ್ದಾರೆ.