ಭಾರತದಲ್ಲಿ ಅಕ್ರಮವಾಗಿ ತಂಗಿದ್ದ 82 ವಿದೇಶಿಯರು ಗಡಿಪಾರು
ನವದೆಹಲಿ: ಭಾರತದಲ್ಲಿ ಅಕ್ರಮವಾಗಿ ತಂಗಿದ್ದ ಒಟ್ಟು 28 ವಿದೇಶಿಯರನ್ನು ಮಾರ್ಚ್‌ನಲ್ಲಿ ನವದೆಹಲಿಯ ದ್ವಾರಕಾ ಪ್ರದೇಶದಿಂದ ಗಡಿಪಾರು ಮಾಡಲಾಗಿದ್ದು, ಈ ವರ್ಷ ಅಂತಹ ಪ್ರಕರಣಗಳ ಒಟ್ಟು ಸಂಖ್ಯೆ 82 ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಅಧಿಕೃತ ಮಾಹಿತಿಯ ಪ್ರಕಾರ, 2022 ರಲ್ಲಿ ಒಟ್ಟು 437 ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಈ ವರ್ಷ ಇಲ್ಲಿಯವರೆಗೆ ಒಟ್ಟು 82 ವಿದೇಶಿ ಪ್ರಜೆಗಳನ್ನು ದೇಶದಿಂದ ಗಡೀಪಾರು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಲವರು ವಿದೇಶಿಯರು ಮಾನ್ಯ ವೀಸಾ ಇಲ್ಲದೆ ಭಾರತದಲ್ಲಿ ತಂಗಿರುವುದು ಕಂಡುಬಂದಿದೆ. ಅವರನ್ನು ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿಗಳ (ಎಫ್‌ಆರ್‌ಆರ್‌ಒ) ಮುಂದೆ ಹಾಜರುಪಡಿಸಲಾಯಿತು. ಅಧಿಕಾರಿಗಳು ಅವರನ್ನು ಗಡಿಪಾರು ಮಾಡಲು ಆದೇಶಿಸಿದರು. ಅದರಂತೆ ಅವರನ್ನು ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.