ಭಾರತದಲ್ಲಿ ಸೆಮಿಕಂಡಕ್ಟರ್ ಚಿಪ್‌ಗಳನ್ನು ವಿನ್ಯಾಸಗೊಳಿಸಲು ಕೇಂದ್ರ ಸಚಿವ ಸಂಪುಟ ಗ್ರೀನ್ ಸಿಗ್ನಲ್

ನವದೆಹಲಿ: 2021-26ಕ್ಕೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 22 ಲಕ್ಷ ರೈತರಿಗೆ ಅನುಕೂಲವಾಗಿದೆ ಅಂತ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ ಅವರು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯನ್ನುಉದ್ದೇಶಿಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೇ ಮಾತನಾಡಿ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸಣ್ಣ ಮೊತ್ತದ ರುಪೇ ಡೆಬಿಟ್ ಕಾರ್ಡ್ ಮತ್ತು BHIM UPI ಮೂಲಕ ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹಕಗಳನ್ನು ನೀಡುವ ಯೋಜನೆಯನ್ನು ಕೇಂದ್ರ ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದ್ದು ಇದಕ್ಕೆ ಸುಮಾರು 1,300 ಕೋಟಿ ರೂಪಾಯಿ ವೆಚ್ಚವಾಗಲಿದೆ ಅಂತ ಅವರು ಇದೇ ವೇಳೇ ತಿಳಿಸಿದರು
ಸೆಮಿ ಕಂಡಕ್ಟರ್ ಚಿಪ್‌ಗಳನ್ನು ಭಾರತದಲ್ಲಿ ವಿನ್ಯಾಸಗೊಳಿಸಿ, ತಯಾರಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಅವರು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೇ ಅವರು ಚಿಪ್ ವಿನ್ಯಾಸಗೊಳಿಸುವುದಕ್ಕೆ ಸಂಬಂಧಪಟ್ಟಂತೆ ಇಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು.
ಭಾರತದಲ್ಲಿ ಸೆಮಿಕಂಡಕ್ಟರ್ ಚಿಪ್‌ಗಳನ್ನು ವಿನ್ಯಾಸಗೊಳಿಸಲು ಸಂಪೂರ್ಣ ಪರಿಸರ ವ್ಯವಸ್ಥೆ ಮತ್ತು ಪ್ರದರ್ಶನ ತಯಾರಿಕೆಯನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಮಂಜೂರು ಮಾಡಲಾಗಿದೆ. ಈ ಯೋಜನೆಗೆ 6 ವರ್ಷಗಳಲ್ಲಿ 76,000 ಕೋಟಿ ರೂಪಾಯಿ ವೆಚ್ಚವಾಗಲಿದೆ ಅಂತ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದರು.