ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಕೋವಿಡ್ ಗೈಡ್ ಲೈನ್ಸ್ ಜಾರಿಗೊಳಿಸಲಾಗುತ್ತಿದೆ'

ಬೆಳಗಾವಿ: ಭಾರತ್ ಜೋಡೋ ಯಾತ್ರೆ ಕಾಣುತ್ತಿರುವ ಅಪಾರ ಯಶಸ್ಸಿನಿಂದ ಗಾಬರಿಗೊಳಗಾಗಿರುವ ಕೇಂದ್ರ ಸರ್ಕಾರ ಅದನ್ನು ನಿಲ್ಲಿಸಲು ಕೋವಿಡ್-19 ಸೋಂಕು ನಿಯಂತ್ರಣ ನಿಯಮಾವಳಿಗಳನ್ನು ಜಾರಿಗೊಳಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮೇಕೆದಾಟು ಯೋಜನೆ ಅನುಷ್ಠಾನವನ್ನು ಆಗ್ರಹಿಸಿ ಪಾದಯಾತ್ರೆ ಕೈಗೊಂಡಾಗಲೂ ಕೊರೋನಾ ಸೋಂಕಿನ ನೆಪವೊಡ್ಡಿ ಅದನ್ನು ನಿಲ್ಲಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಿತ್ತು ಎಂದರು.