ಭಾರೀ ಮಳೆಗೆ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ : ರಾಜ್ಯಕ್ಕೆ `ಚಂಡಮಾರುತ' ಎಂಟ್ರಿ!

ಭಾರೀ ಮಳೆಗೆ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ : ರಾಜ್ಯಕ್ಕೆ `ಚಂಡಮಾರುತ' ಎಂಟ್ರಿ!

ಬೆಂಗಳೂರು : ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಆತಂಕ ಎದುರಾಗಿದ್ದು, ಅಕ್ಟೋಒಬರ್ 24 ರಂದು ರಾಜ್ಯಕ್ಕೆ ಚಂಡಮಾರುತ ಎಂಟ್ರಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಅಕ್ಟೋಬರ್ 24 ರಂದು ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದ್ದು, ರಾಜ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರ್ನಾಟಕ ಸೇರಿದಂತೆ ತಮಿಳುನಾಡು, ತೆಲಂಗಾಣ, ಪಶ್ಚಿಮಬಂಗಾಳ, ಒಡಿಶಾ, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ.ಇನ್ನು ರಾಜ್ಯದ ಹಲವಡೆ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳ ಕೆಲವಡೆ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.