ಭಾಷೆಗಾಗಿ ಪ್ರಾಣ ಕೊಡೋಕೂ ಸಿದ್ಧ ಎಂದ ಶಿವಣ್ಣ!
ಭಾಷೆಗಾಗಿ ನನ್ನ ಪ್ರಾಣ ಕೊಡೋಕೂ ಸಿದ್ದ ಎಂದ ಶಿವಣ್ಣ!
'ಭಾಷೆಗಾಗಿ ನಾನು ಪ್ರಾಣ ಕೊಡೋದಕ್ಕೂ ಸಿದ್ಧ. ಭಾಷೆಯನ್ನು ಅಗೌರವಿಸುವಂತಹ ಕೆಲಸ ಮಾಡಬೇಡಿ ಎಂದು ಚಿತ್ರನಟ ಶಿವರಾಜ್ ಕುಮಾರ್ ಹೇಳಿದ್ದಾರೆ. 'ನಮ್ಮ ಬಾವುಟ ಸುಟ್ಟರೆ ತಾಯಿಯನ್ನೇ ಸುಟ್ಟಹಾಗೆ. ಇಂತಹ ಕೆಲಸ ಮಾಡುವುದು ಅಕ್ಷಮ್ಯ. ಕನ್ನಡಿಗರಿಗೆ ಏನೂ ಪವರ್ ಇಲ್ಲ ಅಂತೆಲ್ಲ ತಿಳಿದುಕೊಳ್ಳಬೇಡಿ' ಎಂದು ಶಿವಣ್ಣ ಕನ್ನಡ ಬಾವುಟ ಸುಟ್ಟವರ ವಿರುದ್ಧ ಕಿಡಿಕಾರಿದರು.'ಯಾವ ರಾಜ್ಯದಲ್ಲಿ ಯಾವ ಭಾಷೆ ಇದೆಯೋ ಅದಕ್ಕೆ ಮರಾರಯದೆ ಕೊಡೋದು ಧರ್ಮ. ಭಾಷೆ ಎಲ್ಲರಿಗೂ ಮುಖ್ಯ. ನೆಲದ ಭಾಷೆಗೆ ಅಗೌರವ ತೋರುವಂತಹ ಕೆಲಸ ಮಾಡಬೇಡಿ. ಕನ್ನಡ ಬಾವುಟ ಸುಡುವುದು ಎಷ್ಟುಸರಿ? ಅಂಥಾ ಕೆಲಸ ಯಾವತ್ತಿಗೂ ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ'
'ನಮ್ಮ ಮೇಲೆ ದಬ್ಬಾಳಿಕೆ ಮಾಡಬೇಡಿ. ನಾವು ಸುಮ್ಮನಿದ್ದೇವೆ ಎಂದರೆ ನಮಗೆ ಶಕ್ತಿ ಇಲ್ಲ ಅಂತ ಅಂದುಕೊಳ್ಳಬಾರದು. ಮನುಷ್ಯನಿಗೆ ಕೋಪ ಬಂದರೆ ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತದೆ. ಸರ್ಕಾರದವರು ಇದಕ್ಕಾಗಿ ಫೈಟ್ ಮಾಡಬೇಕು. ವೋಟಿಂಗ್ ರಾಜಕಾರಣಕ್ಕಾಗಿ ಅವರು ಸುಮ್ಮನಾಗಬಾರದು. 'ನಮ್ಮ ಭಾಷೆಗೆ ನಾನು ಪ್ರಾಣ ಕೊಡೋಕೂ ಸಿದ್ಧನಿದ್ದೇನೆ. ನನಗೆ 59 ವರ್ಷ ಆಯ್ತು. 60 ವರ್ಷ ನನ್ನನ್ನು ಬೆಳೆಸಿದ್ದೀರಿ. ಈಗ ಭಾಷೆಗಾಗಿಯೇ ಪ್ರಾಣ ಹೋಗಬೇಕು ಎಂದರೆ ಹೋಗಲಿ ಬಿಡಿ ಎಂದು ಖಡಕ್ ಆಗಿ ಹೇಳಿಕೆ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ಶಿವಣ್ಣ ಮಾತು ಕೇಳಿ ಬಹುಪರಾಕ್ ಹೇಳಿದ್ದಾರೆ