ಗೋವಾ-ಮುಂಬೈ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮಗು ಸೇರಿ 9 ಮಂದಿ ಸಾವು

ಮುಂಬೈ: ಮುಂಬೈ-ಗೋವಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಹೆದ್ದಾರಿಯ ಮಂಗಾವ್ ಬಳಿ ಅಪಘಾತ ಸಂಭವಿಸಿದೆ.
ಮೃತರಲ್ಲಿ ಐವರು ಪುರುಷರು ಹಾಗೂ ಮೂವರು ಮಹಿಳೆಯರು ಹಾಗೂ ಒಂದು ಮಗು ಸೇರಿದೆ. ಅಪಘಾತದಲ್ಲಿ ಗಾಯಗೊಂಡ ಒಂದು ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.