ತಮಿಳುನಾಡು: ಭೀಕರ ಸರಣಿ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

ತಮಿಳುನಾಡು: ಭೀಕರ ಸರಣಿ ಅಪಘಾತಕ್ಕೆ ಒಂದೇ ಕುಟುಂಬದ ಐವರು ಬಲಿ

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಸರಣಿ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

ಮೃತರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದೆ.

ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ, ಮೃತರ ಗುರುತು ಪತ್ತೆಯಾಗಿಲ್ಲ. ವಾಹನದ ಆರ್‌ಸಿ ಪರಿಶೀಲನೆ ವೇಳೆ ಅಪಘಾತಕ್ಕೊಳಗಾದ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದೆ.

ರಸ್ತೆಬದಿ ನಿಂತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿತ್ತು, ಇದೇ ವೇಳೆ ಎರಡು ಬಸ್‌ಗಳು, ಮತ್ತೊಂದು ಟ್ರಕ್ ಅದೇ ಕಾರಿಗೆ ಅಪ್ಪಳಿಸಿದ್ದರಿಂದ ಕಾರು ಸಂಪೂರ್ಣ ಛಿದ್ರವಾಗಿದೆ. ಇದರಿಂದ ಕಾರಿನಲ್ಲಿದ್ದ ಐವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಡಲೂರಿನ ವೇಪ್ಪೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆಗೆದಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಲೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.