ಭ್ರಷ್ಟ ಬಿಜೆಪಿ ಸರ್ಕಾರದಿಂದ ಜನರು ರೋಸಿ ಹೋಗಿದ್ದಾರೆ : ಡಿ.ಕೆ. ಶಿವಕುಮಾರ್ ವಾಗ್ದಾಳಿ

ಭ್ರಷ್ಟ ಬಿಜೆಪಿ ಸರ್ಕಾರದಿಂದ ಜನರು ರೋಸಿ ಹೋಗಿದ್ದಾರೆ : ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು : ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜನರು ರೋಸಿ ಹೋಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಜನರು ರೋಸಿ ಹೋಗಿದ್ದಾರೆ.

ಒಂದು ಪೋಡಿ ಮಾಡಿಕೊಳ್ಳುವುದಕ್ಕೂ 40 ಸಾವಿರ ರೂ. ಕೊಡಬೇಕು. ಆರ್. ಅಶೋಕ್ ಗ್ರಾಮ ವಾಸ್ತವ್ಯದ ಹೆಸರಿನಲ್ಲಿ ಹೋಗಿ ಮಲಗಿ ಬರ್ತಾರೆ. ಆದರೆ ಏನು ಪ್ರಯೋಜನ ಇಲ್ಲ ಎಂದು ಕಿಡಿಕಾರಿದ್ದಾರೆ.

ನಾವು ರಾಜ್ಯದ ಜನರಿಗೆ ಉಚಿತ ಘೋಷಣೆ ಮಾಡಿದ್ದೇವೆ. ಗ್ಯಾರಂಟಿ ಸಹಿ ಹಾಕಿ ಕಳುಹಿಸಿ ಕೊಡುತಿದ್ದೇವೆ. ಯಾವ ರೀತಿ ಉಚಿತವಾಗಿ ಕೊಡಬೇಕೆಂದು ತೋರಿಸುತ್ತೇವೆ ಎಂದು ಹೇಳಿದ್ದಾರೆ.