ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಆಪ್‌ಗೆ ಮತ ಚಲಾಯಿಸಿ: ಕೇಜ್ರಿವಾಲ್ ಮನವಿ

ಭ್ರಷ್ಟಾಚಾರ ಮುಕ್ತ ಸರ್ಕಾರಕ್ಕಾಗಿ ಎಎಪಿಗೆ ಮತ ಚಲಾಯಿಸಿ ಎಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಪಾಲಿಕೆಯಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ. ಪ್ರಾಮಾಣಿಕ ಮತ್ತು ದುಡಿಯುವ ಸರ್ಕಾರವನ್ನು ರಚಿಸಲು ಇಂದೇ ನಿಮ್ಮ ಮತ ಚಲಾಯಿಸಿ ಎಂದು ಜನತೆಯೊಂದಿಗೆ ಮನವಿ ಮಾಡಿಕೊಂಡಿದ್ದಾರೆ.