ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ `Phd' ಮಾಡಿದೆ : ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಳಗಾವಿ : ಕಾಂಗ್ರೆಸ್ ಕಾಲದಲ್ಲಿ ಹತ್ತು ಹಲವು ಭ್ರಷ್ಟಾಚಾರಗಳು ನಡೆದಿದ್ದು, ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಪಿಹೆಚ್ ಡಿ ಮಾಡಿದೆ ಎಂದು ಕಾಂಗ್ರೆಸ್ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಪಿಹೆಚ್ ಡಿ ಮಾಡಿದೆ.
ಭ್ರಷ್ಟಾಚಾರದ ಗಂಗೋತ್ರಿ ಅಂದ್ರೆ ಅದು ಕಾಂಗ್ರೆಸ್, ಈಗ ಸೋಗಲಾಡಿತನ ಮಾಡುತ್ತಿದೆ.ಇವರು ಲೋಕಾಯಕ್ತ ಸಂಸ್ಥೆಯನ್ನೇ ಮುಚ್ಚಿದ ಪುಣ್ಯಾತ್ಮರು. ಲೋಕಾಯುಕ್ತ ಸಂಸ್ಥೆ ಮುಚ್ಚಿ ನಮಗೆ ಪಾಠ ಮಾಡ್ತಾರೆ.ಭ್ರಷ್ಟಾಚಾರದ ಜೊತೆ ಸೇರಿ ಸರ್ಕಾರ ನಡೆಸಿದ್ದು ಕಾಂಗ್ರೆಸ್, ತಾವು ಮಾಡಿದ ಪಾಪದ ಕೆಲಸ ಮುಚ್ಚಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ನಡೆಸಿದ್ದಾರೆ.