ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ : ನಾಲ್ವರು ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರು : ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎಂಬವರನ್ನು ಬಂಧಿಸಲಾಗಿದೆ.ಡಿ.6ರಂದು ಘಟನೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಂಕನಾಡಿಯ ಜ್ಯುವೆಲರಿ ಶಾಪ್ಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆ ನಡೆಸಿದ್ದರು.
ಮಂಗಳೂರಿನ ಕಂಕನಾಡಿನ ಬಳಿ ಇರುವ ಜ್ಯುವೆಲ್ಲರಿ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಅನ್ಯಕೋಮಿನ ಯುವಕ ಹಿಂದೂ ಯುವತಿ ಜೊತೆ ಇದ್ದದ್ದನ್ನು ಕಂಡು ಲವ್ ಜಿಹಾದ್ ಆರೋಪ ಮಾಡಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. . ಹಿಂದೂ ಸಂಘಟನೆ ಕಾರ್ಯಕರ್ತರು ಬಂಟ್ವಾಳ ಮೂಲದ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.