ಮಂಗಳೂರಿನಲ್ಲಿ ಪರೀಕ್ಷೆ ಭಯದಿಂದ 'SSLC' ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರಿನಲ್ಲಿ ಪರೀಕ್ಷೆ ಭಯದಿಂದ 'SSLC' ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು : ನಾಳೆಯಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದೆ, ಈ ಬೆನ್ನಲ್ಲೇ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ಪರೀಕ್ಷೆಗೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕಿನ ಕೋಡಿಂಬಾಳಗ ಗುಂಡಿಮಜಲ್ ಗ್ರಾಮದಲ್ಲಿ ಅದ್ವೈತ್ ಶೆಟ್ಟಿ (15) ಎಂಬ ಬಾಲಕ ಮೃತಪಟ್ಟಿದ್ದಾನೆ. ಮನೆಯಿಂದ ಹೊರಗಡೆ ಬಂದವರು ನಾಪತ್ತೆಯಾಗಿದ್ದನು, ನಂತರ ನದಿಯ ಪಕ್ಕದಲ್ಲಿ ಸ್ಕೂಲ್ ಬ್ಯಾಗ್ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯ ನಡೆಸಿದಾಗ ಬಾಲಕನ ಶವ ಪತ್ತೆಯಾಗಿದೆ.

ಮಾರ್ಚ್ 31 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೈವದ ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ದೈವದ ನರ್ತನ ವೇಳೆಯೇ ಕುಸಿದು ಬಿದ್ದು ದೈವ ನರ್ತಕ ಸಾವನ್ನಪ್ಪಿರುವ ಘಟನೆ ನಡೆದಿದೆ.59 ಕಾಂತು ಅಜಿಲ ಸಾವ್ನಪ್ಪಿರುವ ವ್ಯಕ್ತಿ. ತಡರಾತ್ರಿ ರಾತ್ರಿ ಎಡಮಂಗಲ ಗ್ರಾಮದ ಇಡ್ಯಟ್ಕ ಎಂಬಲಿ ದೈವ ನಡೆದಿತ್ತು. ಶಿರಾಡಿ-ಕಲ್ಕುಡ ದೈವದ ನೇಮೊತ್ಸವ ಈ ವೇಳೆ ಶಿರಾಡಿ ದೈವದ ನರ್ತಕರಾಗಿ ಕುಣಿಯುತ್ತಿದ್ದರು.ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.

ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ದೈವ ನರ್ತಕನ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.