ಮಂಗಳೂರು ಏರ್ಪೋಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ 'ಭರ್ಜರಿ ಬೇಟೆ' : 2 ಕೋಟಿ ಮೌಲ್ಯದ ಅಕ್ರಮ ಚಿನ್ನ ಜಪ್ತಿ
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 18 ದಿನಗಳಲ್ಲಿ ಬರೋಬ್ಬರಿ 2 ಕೋಟಿ ಮೌಲ್ಯದ ಅಕ್ರಮ ಚಿನ್ನ ಜಪ್ತಿ ಮಾಡಿದ್ದಾರೆ.
ಜನವರಿ 1ರಿಂದ 18ರ ತನಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೇಟೆಯಾಗಡಿದ್ದು, 18 ದಿನಗಳಲ್ಲಿ 2 ಕೋಟಿ ಮೌಲ್ಯದ ಅಕ್ರಮ ಚಿನ್ನ ಪತ್ತೆ ಹಚ್ಚಿದ್ದಾರೆ.
ದುಬೈ ಹಾಗೂ ಅಬುಧಾಬಿಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ 8 ಮಂದಿ ಪುರುಷ ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದರು. ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಪತ್ತೆ ಹಚ್ಚಿ ಈ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಬಾಯಿಯೊಳಗಡೆ, ಪೇಸ್ಟ್ ರೂಪದಲ್ಲಿ, ಗುದನಾಳ ಸೇರಿ ಹಲವು ಕಡೆ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದರು. 18 ದಿನಗಳಲ್ಲಿ 2 ಕೋಟಿ ಮೌಲ್ಯದ ಅಕ್ರಮ ಚಿನ್ನ ಪತ್ತೆ ಹಚ್ಚಿದ್ದಾರೆ.
ಸಾಂದರ್ಭಿಕ ಚಿತ್ರ