ಮಂಗಳೂರು: ವಿದೇಶದಿಂದ ಬಂದ ವ್ಯಕ್ತಿಗೆ ಕೋವಿಡ್ ದೃಢ
ಮಂಗಳೂರು: ಸೌದಿ ಅರೇಬಿಯದಿಂದ ಆಗಮಿಸಿದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್ ದೃಢಪಟ್ಟಿದ್ದು, ಅವರ ಗಂಟಲ ದ್ರವ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಂಗಳೂರಿನ ವ್ಯಕ್ತಿಯನ್ನು ಅಲ್ಲಿ ಕೋವಿಡ್ ತಪಾಸಣೆಗೆ ಒಳಪಡಿಸಿದಾಗ ಕೋವಿಡ್ ದೃಢಪಟ್ಟಿದೆ.
ಆದರೆ ರ್‍ಯಾಂಡಮ್ ಆಗಿ ತಪಾಸಣೆ ವೇಳೆ ಪಾಸಿಟಿವ್ ಕಂಡುಬಂದಿದೆ.
ದ.ಕ.ದಲ್ಲಿ 1 ಪ್ರಕರಣ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಬ್ಬರಲ್ಲಿ ಕೋವಿಡ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ ಒಂದು ಕೋವಿಡ್ ಪ್ರಕರಣ ಇದೆ.