ಮಂಗಳೂರು: ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದ ತೇಜಸ್ವಿ ಸೂರ್ಯ

ಮಂಗಳೂರು: ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದ ತೇಜಸ್ವಿ ಸೂರ್ಯ

ಮಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರೂ, ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ಮಂಗಳೂರಿನ ಡೊಂಗರಕೇರಿಯಲ್ಲಿರುವ ಕೆನರಾ ಪ್ರೌಢ ಶಾಲೆ ( ಪ್ರಧಾನ) ಇಲ್ಲಿ ಭೇಟಿ ನೀಡಿ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.

135 ವರ್ಷಗಳ ಹಿಂದೆ ಭವಿಷ್ಯದ ಭಾರತದ ಬಗ್ಗೆ ದೂರದೃಷ್ಟಿ ಇಟ್ಟುಕೊಂಡು ಅಮ್ಮೆಂಬಳ ಸುಬ್ಬರಾವ್ ಪೈಯವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಕಿಂಗ್ ಕ್ಷೇತ್ರಗಳು ಪ್ರಸ್ತುತ ಸಾಧಿಸಿರುವ ಹಿರಿಮೆಯ ಬಗ್ಗೆ ತೇಜಸ್ವಿ ಸೂರ್ಯ ಅಭಿಮಾನ ಪಟ್ಟುಕೊಂಡರು.

ಈ ಸಂದರ್ಭದಲ್ಲಿ ದಕ ಜಿಲ್ಲಾ ಭಾಜಪಾ ಅಧ್ಯಕ್ಷರಾದ ಸುದರ್ಶನ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಆಡಳಿತ ಮಂಡಳಿಯ ಸದಸ್ಯರಾದ‌ ನರೇಶ್ ಶೆಣೈ, ಪ್ರಬಂಧಕರಾದ ವಿವೇಕ್ ಶೆಣೈ ಹಾಗೂ ಗಣ್ಯರು ಉಪಸ್ಥಿತರಿದ್ದರು