ಮಂಗಳೂರು: ಪುತ್ರಿಯರ ಅತ್ಯಾಚಾರ ಆರೋಪ; ತಂದೆ ದೋಷಮುಕ್ತಿ

ಮಂಗಳೂರು: ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಹೊರಿಸಿದ್ದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಒಂದು ಪ್ರಕರಣವು ಮಂಗಳೂರು ಪೊಕ್ಸೊ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ. ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ವ್ಯಕ್ತಿ.
2021ರ ಜೂನ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
ತನ್ನ ತಂದೆ ಸತತ ಮೂರು ವರ್ಷಗಳಿಂದ ಅತ್ಯಾಚಾರ ಮಾಡಿದ್ದರು ಎಂದು ಆರೋಪಿಯ ಕಿರಿಯ ಮಗಳು ಆರೋಪಿಸಿದ್ದಳು. ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್‌ಟಿಎಸ್‌ಸಿ ಪೊಕ್ಸೊ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಸರಿಯಾದ ಸಾಕ್ಷ್ಯಾಧಾರಗಳು ಇಲ್ಲ ಎಂದು ನಿರ್ಧರಿಸಿತು.
ಅದರಂತೆ ನ್ಯಾಯಾಧೀಶ ಕೆ.ಎಂ ರಾಧಾಕೃಷ್ಣ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ಮಾಡಿದ್ದಾರೆ. ಆರೋಪಿ ಕಳೆದ ಒಂದೂವರೆ ವರ್ಷಗಳಿಂದ ಜೈಲುವಾಸ ಅನುಭವಿಸಿದ್ದರು.
ಆರೋಪಿಯ ಪರವಾಗಿ ನ್ಯಾಯವಾದಿಗಳಾದ ಆಸಿಫ್ ಬೈಕಾಡಿ, ಮಹಮ್ಮದ್ ಅಸ್ಗರ್ ಮುಡಿಪು, ರುಬಿಯ ಅಕ್ತರ್, ಶ್ರೀನಿಧಿ ಪ್ರಕಾಶ್, ನಿರೀಕ್ಷಾ ವಾದಿಸಿದ್ದರು