ಮಂಗಳೂರು: ಹಾಡಹಗಲೇ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಚೂರಿ ಇರಿತ

ಮಂಗಳೂರು: ನಗರದ ಹಂಪನಕಟ್ಟೆ ಎಂಬಲ್ಲಿ ಜ್ಯುವೆಲ್ಲರಿ ಅಂಗಡಿಯ ಕೆಲಸದ ಸಿಬಂದಿಯನ್ನು ಚೂರಿ ಇರಿದು ಹತ್ಯೆಗೈದ ಘಟನೆ ನಡೆದಿದೆ.
ಜ್ಯುವೆಲ್ಲರಿ ಮಳಿಗೆಯಲ್ಲಿ ಕೆಲಸಕ್ಕಿದ್ದ ರಾಘವ (50) ಮೃತ ದುರ್ದೈವಿಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಘವ ಅವರಿಗೆ ಚೂರಿಯಿಂದ ಇರಿದು ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯ ಗೊಂಡಿದ್ದ ರಾಘವ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.