ಮಂಡ್ಯ: 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
ಮಂಡ್ಯ : ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ (ವಿಎ) ಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಮಂಡ್ಯ ನಗರದ ಗುತ್ತಲು ಬಡಾವಣೆಯ ನಿವಾಸಿ ರೈತ ಆತ್ಮಾನಂದ ಎಂಬುವರಿಂದ 5 ಸಾವಿರ ರೂ.
ಆತ್ಮಾನಂದ ಅವರ ಜಮೀನಿನನ್ನು ಒಟ್ಟುಗೂಡಿಸಿ ಪೋಡಿ ಮಾಡಿ ಆರ್‌ಟಿಸಿ ಮಾಡಿಕೊಡಲು ರೂಪ ಅವರು 15 ಸಾವಿರ ರೂ. ಬೇಡಿಕೆ ಇಟ್ಟಿದ್ದು, ಬುಧವಾರ ಮುಂಗಡವಾಗಿ 5 ಸಾವಿರ ರೂ. ಪಡೆಯುತ್ತಿದ್ದಾಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಡಿವೈಎಸ್‌ಪಿ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ಸಿಬ್ಬಂದಿಗಳಾದ ಶಂಕರ್, ಶರತ್, ಹೇಮಾವತಿ, ನಂದಿನಿ ಅವರ ತಂಡ ದಾಳಿ ನಡೆಸಿತು ಎಂದು ಲೋಕಾಯುಕ್ತ ಎಸ್ಪಿ ಪುಟ್ಟಮಾದಯ್ಯ ತಿಳಿಸಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ