ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ

ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ

ಮುಂಬೈ : ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್‌ ನಿಯಮಿತದ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ನಿರ್ಬಂಧ ಹೇರಿದೆ.

ಬ್ಯಾಂಕ್‌ನ ಹಣಕಾಸು ಸ್ಥಿತಿ ಹದಗೆಡುತ್ತಿರುವ ಕಾರಣ ಆರ್‌ಬಿಐ ಈ ತೀರ್ಮಾನ ಕೈಗೊಂಡಿದೆ. ಆರ್‌ಬಿಐ ಅನುಮತಿ ಇಲ್ಲದೆ ಈ ಹೊಸದಾಗಿ ಸಾಲ ಕೊಡು ವಂತಿಲ್ಲ, ಹೊಸದಾಗಿ ಹೂಡಿಕೆ ಮಾಡುವಂತಿಲ್ಲ, ಹೊಸದಾಗಿ ಠೇವಣಿ ಸ್ವೀಕರಿಸುವಂತೆಯೂ ಇಲ್ಲ.

ಈ ನಿರ್ಬಂಧಗಳು ಆರು ತಿಂಗಳವರೆಗೆ ಜಾರಿಯಲ್ಲಿ ಇರಲಿವೆ ಎಂದು ಆರ್‌ಬಿಐ ಪ್ರತ್ಯೇಕ ಹೇಳಿಕೆಯಲ್ಲಿ ತಿಳಿಸಿದೆ.