ಮಂಡ್ಯದ 5 ರೂ. ವೈದ್ಯ ಶ್ರೀ ಶಂಕರೇಗೌಡರಿಗೆ 'ಇಂಡಿಯನ್‌ ಆಪ್‌ ದಿ ಇಯರ್‌' 2022 ಪ್ರಶಸ್ತಿ : ಸಿಎಂ ಬೊಮ್ಮಾಯ ಶ್ಲಾಘನೆ

ಮಂಡ್ಯದ 5 ರೂ. ವೈದ್ಯ ಶ್ರೀ ಶಂಕರೇಗೌಡರಿಗೆ 'ಇಂಡಿಯನ್‌ ಆಪ್‌ ದಿ ಇಯರ್‌' 2022 ಪ್ರಶಸ್ತಿ : ಸಿಎಂ ಬೊಮ್ಮಾಯ ಶ್ಲಾಘನೆ

ಹೊಸದಿಲ್ಲಿ : ರಾಜ್ಯದಲ್ಲಿ ಕೇವಲ 5 ರೂಪಾಯಿಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಸಾಧನೆಗೈದ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ. ಸಾಮಾಜಿಕ ಬದಲಾವಣೆ ವಿಭಾಗದಲ್ಲಿ ʻ ಇಂಡಿಯನ್‌ ಆಪ್‌ದಿ ಇಯರ್‌ 2022 ʼ ಖಾಸಗಿ ಸಂಸ್ಥೆಯೊಂದು ಗುರುತಿಸಿ ಗೌರವ ಸಲ್ಲಿಸಿದ್ದಾರೆ.

ನಾನು 1982ರಿಂದ 5 ರೂಪಾಯಿಯಲ್ಲಿ ಚಿಕಿತ್ಸೆ ನೀಡುತ್ತ ಬಂದಿದ್ದೇನೆ. ನಮ್ಮಲ್ಲಿ ಯಾವ ಜ್ಞಾನವಿದೆಯೋ ಅದನ್ನು ಎಲ್ಲರಿಗೂ ಸಮಾಜವಾಗಿ ನೀಡಬೇಕು. ಹಾಗಾಗಿ ನನ್ನ ಜ್ಞಾನವನ್ನು ನನ್ನ ಶಿಕ್ಷಣಕ್ಕೆ ಕಾರಣರಾದ ಜನರಿಗೆ ನೀಡಬೇಕು ಎಂಬ ಉದ್ದೇಶದಿಂದ ಪದವಿ ಪಡೆದ ಬಳಿಕ ಈ ವೃತ್ತಿ ಪ್ರಾರಂಭಿಸಿದ್ದೇನೆ ಎಂದು ಪ್ರಶಸ್ತಿ ಸ್ವೀಕರಿಸಿದ ಬಳಿ ಮಾತನಾಡಿದ್ದಾರೆ.

ಈ ಕಾರ್ಯಕ್ರಮವೂ ಹೊಸದಿಲ್ಲಿಯಲ್ಲಿ ಆಯೋಜಿಸಿದ್ದು, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿಗಳಿಸಿರುವ ಮಂಡ್ಯದ ವೈದ್ಯ ಶ್ರೀ ಶಂಕರೇಗೌಡರಿಗೆ ಇಂಡಿಯನ್‌ ಆಫ್‌ ದಿ ಇಯರ್‌ ಪ್ರಶಸ್ತಿ ಲಭಿಸಿರುವುದು ಅತ್ಯಂತ ಅಭಿನಂದನಾರ್ಹ ಸಂಗತಿಯಾಗಿದೆ. ಗ್ರಾಮೀಣ ಭಾಗದ ಜನರ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವೀಟ್‌ ಮಾಡಿದ್ದಾರೆ.