ಮಂಡ್ಯದಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ಆಗ್ರಹಿಸಿ ಪ್ರತಿಭಟನೆ ತಾತ್ಕಾಲಿಕವಾಗಿ ಹಿಂಪಡೆದ ರೈತರು

ಮಂಡ್ಯ: ಅಂಡರ್ ಪಾಸ್ ನಿರ್ಮಾಣಕ್ಕಾಗಿ ಆಗ್ರಹಿಸಿ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕವಾಗಿ ಪ್ರತಿಭಟನೆ ರೈತರು ಹಿಂಪಡೆದಿದ್ದಾರೆ. ಮಂಡ್ಯದ ಹನಕೆರೆ ಗ್ರಾಮದ ಬಳಿ ಪ್ರತಿಭಟನೆ ನಡೆಯುತ್ತಿತ್ತು.
ಇನ್ನೂ ಎರಡು ತಿಂಗಳಲ್ಲಿ ಅಂಡರ್ ಪಾಸ್ ಕಾಮಗಾರಿ ಆರಂಭಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಂದ ಭರವಸೆ ನೀಡಿದ್ದಾರೆ.
ಇನ್ನು ಜಿಲ್ಲೆಯ ಹನಕೆರೆ ಗ್ರಾಮದ ಬಳಿ ಕೆಳಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಸುತ್ತಮುತ್ತಲಿನ ಗ್ರಾಮಗಳ ಜನರು, ರೈತಸಂಘದ ಸದಸ್ಯರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು 2 ಗಂಟೆಗೂ ಹೆಚ್ಚು ಕಾಲ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಹೆದ್ದಾರಿ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು ಇದೇ ಮೊದಲ ಬಾರಿಗೆ ಗ್ರಾಮಸ್ಥರು ದೊಡ್ಡ ಮಟ್ಟದಲ್ಲಿ ಬಂದ್ ನಡೆಸಿ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಹೆದ್ದಾರಿಯ ಎರಡೂ ಕಡೆ ಎತ್ತಿನ ಗಾಡಿ, ಟ್ರ್ಯಾಕ್ಟರ್ ಹಾಗೂ ಜಾನುವಾರುಗಳನ್ನು ನಿಲ್ಲಿಸಿದ್ದ ಕಾರಣ ಸಂಚಾರ ಅಸ್ತವ್ಯವಸ್ತಗೊಂಡಿತ್ತು. 2 ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.ಅಧಿಕಾರಿಗಳು, ಪೊಲೀಸರು ಹಾಗೂ ಪ್ರತಿಭಟಕಾರರ ನಡುವೆ ವಾಗ್ವಾದ, ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಕೆಲ ರೈತ ಮುಖಂಡರನ್ನು ಪೋಲೀಸರು ವಶಕ್ಕೆ ತೆಗೆದುಕೊಂಡಿದ್ದರು.